ಫೆಬ್ರವರಿ 5ರಿಂದ 7ರ ತನಕ ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಫೆಬ್ರವರಿ 5ರಿಂದ 7ರ ತನಕ ಕಲಬುರಗಿಯಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ

ಕಲಬುರಗಿ:85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ, 2020ರ ಫೆಬ್ರವರಿ 5,6 ಹಾಗೂ 7 ರಂದು ಮೂರು ದಿನಗಳ ಕಾಲ 85 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಲಬುರಗಿಯಲ್ಲಿ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಅಧ್ಯಕ್ಷ ಮನುಬಳಿಗಾರ್ ಘೋಷಿಸಿದ್ದಾರೆ.

ಕಲಬುರಗಿಯ ಗುಲ್ಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಡಿಸೆಂಬರ್ ನಲ್ಲೇ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಬೇಕಿತ್ತು. ಆದರೆ ಪ್ರವಾಹ ಉಂಟಾಗಿದ್ದ ಹಿನ್ನೆಲೆಯಲ್ಲಿ 2020ರ ಫೆಬ್ರವರಿಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಮನುಬಳಿಗಾರ್ ಸ್ಪಷ್ಟಪಡಿಸಿದ್ದಾರೆ