ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲ, ಕೇಂದ್ರಸರ್ಕಾರದಿಂದ ಶಿಫಾರಸು : ಸುಪ್ರೀಂಕೋರ್ಟ್ ಮೊರೆ ಹೋದ ಶಿವಸೇನೆ

ರಾಷ್ಟ್ರಪತಿ ಆಳ್ವಿಕೆಗೆ ರಾಜ್ಯಪಾಲ, ಕೇಂದ್ರಸರ್ಕಾರದಿಂದ ಶಿಫಾರಸು : ಸುಪ್ರೀಂಕೋರ್ಟ್ ಮೊರೆ ಹೋದ ಶಿವಸೇನೆ

ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯರಿ ಅವರು ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಜಾರಿಗೊಳಿಸುವಂತೆ ಶಿಫಾರಸು ಮಾಡಿದ ಬೆನ್ನಲ್ಲೇ ಸರ್ಕಾರ ರಚಿಸಲು ಬಹುಮತವನ್ನು ಸಾಬೀತುಪಡಿಸಲು ಪಕ್ಷಕ್ಕೆ ನಿಡಿದ ಸಮಯವನ್ನು ವಿಸ್ತರಿಸದಿರುವ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸರ್ಕಾರ ರಚಿಸಲು ಸೋಮವಾರ ಶರದ್ ಪವಾರ್ ನೇತೃತ್ವದ ಎನ್.ಸಿ.ಪಿ ಗೆ ನೀಡಿದ್ದ ಗಡುವನ್ನು ಕೂಡ ಇಂದು ರದ್ದು ಪಡಿಸಿರುವ ರಾಜ್ಯಪಾಲರು, ವಿಧಾನಸಭಾ ಚುನಾವಣೆಯ ಬಳಿಕ ಯಾವುದೇ ರಾಜಕೀಯ ಪಕ್ಷಗಳು ಸರ್ಕಾರವನ್ನು ರಚಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆಗೆ ಶಿಫಾರಸು ಮಾಡಿದ್ದರು.

ಪ್ರಧಾನಿ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ  ಸಭೆಯೂ ಕೂಡ ಮಹಾರಾಷ್ಟ್ರದಲ್ಲಿ ರಾಷ್ಟ್ರಪತಿ ಆಳ್ವಿಕೆಯನ್ನು ಶಿಫಾರಸು ಮಾಡಿದೆ.